ಶಿವಮೊಗ್ಗ: ಸ್ವಾತಂತ್ರ್ಯೋತ್ಸವ ದಿನದಂದು ಎರಡು ಕೋಮಿನ ಯುವಕರ ನಡುವಿನ ವಾಗ್ವಾದ ತಾರಕಕ್ಕೇರಿದ ಪರಿಣಾಮ ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಯಾದ ಹಿನ್ನೆಲೆಯಲ್ಲಿ ಇಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ನಾಳೆ ಅಲ್ಲದೇ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾಹಿತಿ ನೀಡಿದ್ದಾರೆ.
PublicNext
15/08/2022 08:47 pm