ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ : ಹೈಕೋರ್ಟ್

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ನಿನ್ನೆ ಬ್ರೇಕ್ ಹಾಕಿದ್ದ ಹೈಕೋರ್ಟ್ ಇಂದು ಗ್ರೀನ್ ಸಿಗ್ನಲ್ ಕೊಟ್ಟಿದೆ.

ಹೌದು ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು ಗ್ರೀನ್ ಸಿಗ್ನಲ್ ಕೊಟ್ಟಿದೆ.

ಈ ಮೈದಾನವು ಕಂದಾಯ ಇಲಾಖೆಗೆ ಸೇರಿದ್ದೆಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿತ್ತು. ಇದರ ವಿರುದ್ಧ ವಕ್ಫ್ ಬೋರ್ಡ್ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ನಿನ್ನೆ ಮೈದಾನದಲ್ಲಿ ನಮಾಜ್ ಮಾಡಲು ಅನುಮತಿ ನೀಡಿ,ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ ಎಂದಿತ್ತು. ಇಂದು ಮತ್ತೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

Edited By : Nirmala Aralikatti
PublicNext

PublicNext

26/08/2022 05:50 pm

Cinque Terre

55.49 K

Cinque Terre

56

ಸಂಬಂಧಿತ ಸುದ್ದಿ