ಚಿತ್ರದುರ್ಗ : ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮುರುಘಾ ಶ್ರೀಗಳ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ. ಸದ್ಯ ಸಂತ್ರಸ್ತ ಬಾಲಕಿಯರ ಬಳಿ ತನಿಖಾಧಿಕಾರಿಗಳು ವಿಚಾರಣೆ ನಡೆಸಿ ಮೆಡಿಕಲ್ ಟೆಸ್ಟ್ ಗೆ ಒಳಪಡಿಸಿದ್ದಾರೆ. ಇದೀಗ ನ್ಯಾಯಾಧೀಶರ ಮುಂದೆ ಸಂತ್ರಸ್ತ ಬಾಲಕಿಯರನ್ನು ಹಾಜರುಪಡಿಸುವುದು ಒಂದೇ ಬಾಕಿ ಇದೆ.
ಮಠದಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಅನ್ನೋ ಆರೋಪ ಶ್ರೀಗಳಿಗೆ ಕಂಟಕವಾಗಿದೆ. ಸದ್ಯ ಬಾಲಮಂದಿರದಲ್ಲಿ ಸಂತ್ರಸ್ತ ಬಾಲಕಿಯರು ಇದ್ದಾರೆ.
ಸಿಡಬ್ಲ್ಯೂಸಿ ಕೌನ್ಸಿಲಿಂಗ್ ನಂತರ ಬಾಲಕಿಯರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇತ್ತು. ಆದರೆ ನಿನ್ನೆ ಭಾನುವಾರವಾಗಿದ್ದರಿಂದ ಇಂದು ಮಹಿಳಾ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ದತೆ ನಡೆಸಿದ್ದಾರೆ. ಮೈಸೂರಿನಲ್ಲಿ ಹೇಳಿದನ್ನೇ ನ್ಯಾಯಾಧೀಶರ ಮುಂದೆ ಹೇಳಿದರೆ, ಮುರುಘಾ ಶ್ರೀಗಳು ಪೋಕ್ಸೋ ಪ್ರಕರಣದ ಬಲೆಗೆ ಬೀಳಲಿದ್ದು, ವಿಚಾರಣೆ ಎದುರಿಸಲಿದ್ದಾರೆ.
ಏನೇ ಆಗಲಿ ನ್ಯಾಯಾಧೀಶರ ಮುಂದೆ ಸಂತ್ರಸ್ತ ಬಾಲಕಿಯರ ಹೇಳಿಕೆ ಶ್ರೀಗಳ ಭವಿಷ್ಯ ನಿರ್ಧಾರ ಮಾಡಲಿದೆ.
PublicNext
29/08/2022 07:40 am