ನವದೆಹಲಿ: ಹಿಜಾಬ್ ನಿಷೇಧದ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾದ ಸುಮಾರು 23 ಅರ್ಜಿಗಳ ವಿಚಾರಣೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದೆ.
ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸದಂತೆ ಸರ್ಕಾರ ಆದೇಶ ನೀಡಿದ್ದಕ್ಕೆ ರಾಜ್ಯಾದ್ಯಂತ ಭಾರೀ ಗಲಾಟೆ, ಪ್ರತಿಭಟನೆಗಳು ನಡೆದಿದ್ದವು. ಈ ಪ್ರಕರಣದ ಕುರಿತು ಮಾರ್ಚ್ 15ರಂದು ಕರ್ನಾಟಕ ಹೈಕೋರ್ಟ್ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಲ್ಲಿ ಯೂನಿಫಾರ್ಮ್ ಮಾತ್ರ ಧರಿಸಬೇಕು, ಯಾವುದೇ ಧರ್ಮ ಸೂಚಕ ಉಡುಪನ್ನು ಧರಿಸುವಂತಿಲ್ಲ ಎಂದು ತೀರ್ಪು ನೀಡಿತ್ತು.
PublicNext
29/08/2022 06:33 pm