ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು,ಈ ಸಂಬಂಧ ಶ್ರೀಗಳ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಜಿಲ್ಲಾ 2ನೇ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.ಇನ್ನು ಬಂಧನ ಭೀತಿ ಎದುರಿಸುತ್ತಿರುವ ಶರಣರು ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಸದ್ಯ ಅರ್ಜಿ ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಶ್ರೀಗಳನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ.

ಇನ್ನು ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಶ್ರೀಗಳು, ನನ್ನ ವಿರುದ್ಧ ಪಿತೂರಿ ನಡೆದಿದೆ. ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

30/08/2022 07:19 am

Cinque Terre

135.96 K

Cinque Terre

6