ನವದೆಹಲಿ: ಕಳೆದ ಮೂರು ದಶಕಗಳಲ್ಲಿ ಭಾರತ ಕಂಡಂಥ ಅತ್ಯಂತ ಎರಡು ವಿವಾದಿತ ಪ್ರಕರಣಗಳಾದ 1992 ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಹಾಗೂ 2002ರ ಗುಜರಾತ್ ಗಲಭೆಗೆ ಸಂಬಂಧಪಟ್ಟ ಎಲ್ಲಾ ಮುಕ್ತಾಯ ಮಾಡುವುದಾಗಿ ಘೋಷಣೆ ಮಾಡಿದೆ. ಇನ್ನು ಈ ಪ್ರಕರಣದಲ್ಲಿ ಯಾವುದೇ ವಿಚಾರಣೆಯನ್ನು ಮಾಡಲಾಗುವುದಿಲ್ಲ ಎಂದು ಪ್ರಮುಖ ನಿರ್ಧಾರ ಮಾಡಿದೆ.
ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು 2019ರಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಈ ವಿವಾದಿತ ಪ್ರದೇಶದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಕೋರ್ಟ್ ಆದೇಶಿಸಿತ್ತು. ಅಯೋಧ್ಯೆಯಲ್ಲಿ 5 ಎಕರೆ ಪರ್ಯಾಯ ಭೂಮಿಯನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ನಿರ್ಮಾಣಕ್ಕಾಗಿ ನೀಡಲು ಸೂಚಿಸಿತ್ತು.
ಅದೇ ರೀತಿ, ಬಾಬ್ರಿ ಮಸೀದಿ ಕಟ್ಟಡವನ್ನು ಕರಸೇವಕರು ಕೆಡವಿಹಾಕಿದ ಘಟನೆ ಸಂಬಂಧ 2020ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. 28 ವರ್ಷಗಳ ಈ ಹಳೆಯ ಪ್ರಕರಣದ ಅಂತಿಮ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿತ್ತು. ಬಾಬರಿ ಮಸೀದಿ ಧ್ವಂಸ ಮಾಡಿದ್ದು ಪೂರ್ವನಿಯೋಜಿತ ಎಂದು ಅನಿಸುವುದಕ್ಕೆ ಪ್ರಬಲ ಸಾಕ್ಷ್ಯಾಧಾರಗಳು ಇಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಲ್ಲಾ 32 ಆರೋಪಿಗಳನ್ನ ಖುಲಾಸೆಗೊಳಿಸಿತ್ತು. ಆದ್ದರಿಂದ ಎಲ್ಲಾ ಪ್ರಮುಖ ಕೇಸ್ಗಳೂ ಮುಗಿದಿರುವ ಹಿನ್ನೆಲೆಯಲ್ಲಿ ಉಳಿದ ಕೇಸ್ಗಳಿಗೆ ಯಾವುದೇ ಮಾನ್ಯತೆ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ಹೇಳಿದೆ.
ಇನ್ನು 2002ರ ಗುಜರಾತ್ನ ಗೋಧ್ರಾ ಗಲಭೆ ಪ್ರಕರಣಕ್ಕೆ ಬರುವುದಾದರೆ, ಕೋರ್ಟ್ ಆದೇಶದ ಮೇರೆಗೆ ವಿಶೇಷ ತನಿಖಾ ತಂಡವು ಒಂಬತ್ತು ಪ್ರಮುಖ ಪ್ರಕರಣಗಳಲ್ಲಿ ಕೇಸ್ ದಾಖಲು ಮಾಡಿತ್ತು. ಈ ಪೈಕಿ ಎಂಟು ಪ್ರಕರಣಗಳಲ್ಲಿ ವಿಚಾರಣೆಗಳು ಮುಗಿದು ಹೋಗಿವೆ. ಈ ಹಿನ್ನೆಲೆಯಲ್ಲಿ ಸದ್ಯ ಇವು ನಿರುಪಯುಕ್ತವಾಗಿವೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಇನ್ನೊಂದು ಪ್ರಕರಣದಲ್ಲಿ ಮಾತ್ರ ನರೋದಾಗಾಂವ್‌ನ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದು ಅದು ಮುಂದುವರಿಯಲಿದ್ದು, ಉಳಿದ ಕೇಸ್ಗಳು ಕ್ಲೋಸ್ ಮಾಡುವುದಾಗಿ ಹೇಳಿದೆ. ಇದೇ ವೇಳೆ, 2002 ರ ಗೋಧ್ರಾ ಗಲಭೆ ಪ್ರಕರಣಗಳಲ್ಲಿ ಸುಳ್ಳು ಸಾಕ್ಷ್ಯ ಸೃಷ್ಟಿಸಿ ಅಮಾಯಕರನ್ನು ಬಂಧಿಸುವಲ್ಲಿ ಪಿತೂರಿ ಮಾಡಿದ ಆರೋಪ ಹೊತ್ತ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.
PublicNext
30/08/2022 06:19 pm