ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವಂತಿಲ್ಲ: ಸುಪ್ರೀಮ್ ಆದೇಶ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಹೈಕೋರ್ಟ್ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಿದೆ. ೨ ದಿನಗಳ ಕಾಲ ಯಥಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಿದ್ದು, ಬೇರೆಡೆಗೆ ಗಣೇಶೋತ್ಸವ ಆಚರಣೆ ಅವಕಾಶ ನೀಡಲಾಗಿದೆ. ಈ ನಡುವೆ ಈಗಾಗಲೇ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಂಡಿತ್ತು.

ಹೈಕೋರ್ಟ್ ನೀಡಿದಂತ ಆದೇಶವನ್ನು ಪ್ರಶ್ನಿಸಿ, ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ತ್ರಿಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಇಂದು ಸುಪ್ರೀಂ ಕೋರ್ಟ್ ನ ದ್ವಿಸದಸ್ಯ ನ್ಯಾಯಪೀಠದಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ನೀಡಿದಂತ ಹೈಕೋರ್ಟ್ ಅನುಮತಿಯನ್ನು ಪ್ರಶ್ನಿಸಿದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಈ ಬಳಿಕ ಮಧ್ಯಂತರ ಆದೇಶ ನೀಡೋದಕ್ಕೆ ನಿರಾಕರಿಸಿದ್ದ ನ್ಯಾಯಪೀಠವು, ಸಿಜೆಐ ನೇತೃತ್ವದ ಪೀಠಕ್ಕೆ ವರ್ಗಾವಣೆ ಮಾಡಿತ್ತು.

Edited By : Nagaraj Tulugeri
PublicNext

PublicNext

30/08/2022 06:52 pm

Cinque Terre

72.43 K

Cinque Terre

17

ಸಂಬಂಧಿತ ಸುದ್ದಿ