ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರಕರಣವೊಂದು ದಾಖಲಾಗಿದ್ದು ಸದ್ಯ ಶ್ರೀಗಳನ್ನು ಬಂಧಿಸಲಾಗಿದೆ.ಸದ್ಯ ಶ್ರೀ ಪರ ವಕೀಲ ಇಂದು ಚಿತ್ರದುರ್ಗದ ಜಿಲ್ಲಾ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಎಫ್ ಐಆರ್ ದಾಖಲಾದ ಏಳು ದಿನಗಳ ಬಳಿಕ ಶ್ರೀಗಳು ಗುರುವಾರ ರಾತ್ರೋರಾತ್ರಿ ಬಂಧನಕ್ಕೊಳಗಾಗಿದ್ದರು. ನಂತರ ಶ್ರೀಗಳನ್ನು 2ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಠದ ವಕೀಲ ಉಮೇಶ್,ಅರ್ಜಿ ವಿಚಾರಣೆಗೆ ಬರುವ ಮುನ್ನವೇ ಶ್ರೀಗಳನ್ನು ಬಂಧಿಸಲಾಗಿದೆ. ಈ ಹಿನ್ನೆಲೆ ರೆಗ್ಯುಲರ್ ಜಾಮೀನು ಪಡೆಯಲು ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
PublicNext
03/09/2022 10:31 am