ನವದೆಹಲಿ: ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಈ ಕುರಿತು ವಿಚಾರಣೆ ನಡೆಸುತ್ತಿದೆ. ಈ ವೇಳೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಖಡಕ್ ಪ್ರಶ್ನೆ ಕೇಳಿದೆ. ಈ ಕುರಿತ ವಿವರ ಇಲ್ಲಿದೆ
ಹಿಜಾಬ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವೇಳೆ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟೇಲಿರಿದ ಅರ್ಜಿದಾರರು ನ್ಯಾಯಮೂರ್ತಿಗಳ ಪ್ರಶ್ನೆಗೆ ಕಕ್ಕಾಬಿಕ್ಕಿಯಾಗಿದ್ದಾರೆ. ನಿಮ್ಮ ರೀತಿಯಲ್ಲೇ ವಾದ ಮಾಡುವುದಾದರೆ ಬಟ್ಟೆ ಧರಿಸುವುದು ಮೂಲಭೂತ ಹಕ್ಕಾದರೆ, ವಿವಸ್ತ್ರಗೊಳ್ಳುವುದು ಮೂಲಭೂತ ಹಕ್ಕಾಗಲಿದೆ.
ಈ ರೀತಿಯ ವಾದಕ್ಕೆ ತಾರ್ಕಿಕ ಅಂತ್ಯ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತ ಹೇಳಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಜಸ್ಟೀಸ್ ಹೇಮಂತ್ ಗುಪ್ತ, ವಿಚಾರಣೆ ಮುಂದೂಡಿದ್ದಾರೆ.
PublicNext
08/09/2022 04:13 pm