ಕಾರವಾರ : ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡುವ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ವಿವಿಧೆಡೆ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.
ಹಳಿಯಾಳ, ದಾಂಡೇಲಿ, ಕಾರವಾರ ನಗರ, ಮಲ್ಲಾಪುರ, ಅಂಕೋಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೆ.10ರ ಬೆಳಿಗ್ಗೆ 6ರಿಂದ ಸೆ.11ರ ಬೆಳಿಗ್ಗೆ 6ರವರೆಗೆ ವೈನ್ಶಾಪ್, ಬಾರ್ ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿ ಪ್ರಕಟಣೆ ಹೊರಡಿಸಿದ್ದಾರೆ.
PublicNext
08/09/2022 05:44 pm