ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಲೆ ಅವರನ್ನು ನೇಮಕ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದ ಆಧಾರದಲ್ಲಿ ನ್ಯಾ. ಪಿಬಿ ವರಾಲೆ ಅವರನ್ನು ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.
ಪ್ರಸನ್ನ ಬಿ ವರಲೆ ಅವರು ಈ ಹಿಂದೆ ಬಾಂಬೆ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. ನ್ಯಾ. ವರಲೆ ಅವರು 1985ರ ಆಗಸ್ಟ್ ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು.1992ರವರೆಗೆ ಔರಂಗಾಬಾದ್ ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. 2008ರ ಜುಲೈ 18ರಲ್ಲಿ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು.
ಇದೀಗ ರಾಷ್ಟ್ರಪತಿಗಳ ಆದೇಶಾನುಸಾರು ಪ್ರಸನ್ನ ಬಿ.ವರಲೆ ಅವರನ್ನು ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ರಾಜ್ಯ ಹೈಕೋರ್ಟ್‌ನ ಹಿಂದಿನ ಸಿಜೆ ರಿತುರಾಜ್ ಅವಸ್ಥಿ ಕಳೆದ ಜು.2ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
PublicNext
11/10/2022 12:31 pm