ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣವನ್ನ CJI ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಇಂದು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ.
ಓರ್ವ ನ್ಯಾಯಮೂರ್ತಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಇನ್ನೊರ್ವರು ಹೈಕೋರ್ಟ್ ಆದೇಶವನ್ನು ರದ್ದು ಮಾಡಿದರು. ಈ ಎರಡು ವಿಭಿನ್ನ ತೀರ್ಪಿನಿಂದ ಜನರಲ್ಲಿನ ಗೊಂದಲಕ್ಕೆ ಮತ್ತಷ್ಟು ನೀರೆರೆದಂತಾಗಿದೆ. ಇದೀಗ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.
ನ್ಯಾಯಪೀಠದ ಸದಸ್ಯ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಸಿದರೆ, ಮತ್ತೊರ್ವ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹಿಬಾಜ್ ಬ್ಯಾನ್ ಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದರು. ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.
PublicNext
13/10/2022 10:43 am