ಉತ್ತಮ ಆರೋಗ್ಯಕ್ಕೆ ನಿದ್ರೆ ಬಹುಮುಖ್ಯ ಬಹುತೇಕ ಜನರ ನಿದ್ರಾಹೀನತೆಯ ಸಮಸ್ಯೆಯನ್ನು ಅನುಭವಿಸತ್ತಿದ್ದಾರೆ.
ಆಹಾರ ಪದ್ಧತಿ ಮತ್ತು ಜೀವನಶೈಲಿಯ ಬದಲಾವಣೆ ಕೂಡ ಈ ಸಮಸ್ಯೆಗೆ ಮುಖ್ಯ ಕಾರಣ.
ತಜ್ಞರ ಪ್ರಕಾರ, ಆರೋಗ್ಯವಾಗಿರಲು, ಒಬ್ಬರು ದಿನಕ್ಕೆ ಏಳರಿಂದ ಎಂಟು ಗಂಟೆಗಳ ಕಾಲ ನಿದ್ರೆ ಮಾಡಬೇಕು.
ನಿದ್ರೆಯ ಕೊರತೆಯು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ನಿದ್ರೆಯ ಕೊರತೆಯಿಂದ ಜೀರ್ಣಕ್ರಿಯೆ ಸಮಸ್ಯೆ, ನೆನಪಿನ ಶಕ್ತಿ ಕುಂಠಿತ, ತೂಕ, ಲೈಂಗಿಕ ಜೀವನದ ಮೇಲೆ ನೇರ ದುಷ್ಪರಿಣಾಮ ಬೀರುತ್ತದೆ.
ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುವುದಕ್ಕಿಂತ ನಿದ್ರೆಯ ಸಮಸ್ಯೆಯಿಂದ ಬಳಲುತ್ತಿರುವವರು ವಾಹನ ಚಲಾಯಿಸುವುದು ಅಪಾಯಕಾರಿ ಎಂದು ಅಧ್ಯಯನವೊಂದರಿಂದ ತಿಳಿದು ಬಂದಿದೆ.
ನಿದ್ರಾಹೀನತೆಯಿಂದಾಗಿ ಗಮನ, ಜಾಗೃತಿ, ತರ್ಕ ಶಕ್ತಿ ಕಡಿಮೆಯಾಗುತ್ತದೆ.
ಇದು ಯೋಚನೆ ಹಾಗೂ ಅರ್ಥ ಮಾಡಿಕೊಳ್ಳುವ ಶಕ್ತಿ ಮೇಲೆ ನೇರ ಪ್ರಭಾವ ಬೀರುತ್ತದೆ.
ಇನ್ನು ನಿದ್ರೆಯ ಕೊರತೆಯಿಂದ ಹೃದಯಾಘಾತ, ಅಧಿಕ ರಕ್ತದೊತ್ತಡ, ಮಧುಮೇಹ, ಸ್ಟ್ರೋಕ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಹಾಗೆಯೇ ನಿದ್ರಾಹೀನತೆ ಪುರುಷರ ಲೈಂಗಿಕ ಶಕ್ತಿಯನ್ನು ಕುಂಠಿತಗೊಳಿಸುತ್ತದೆ ಎಂದು ಅಧ್ಯಯನದಿಂದ ತಿಳಿದು ಬಂದಿದೆ.
6 ಗಂಟೆಗಿಂತ ಕಡಿಮೆ ನಿದ್ರೆ ಮಾಡುವವರು ಖಿನ್ನತೆಗೊಳಗಾಗುತ್ತಾರೆ ಎಂದು ಅಧ್ಯಯನ ತಂಡ ಎಚ್ಚರಿಸಿದೆ.
PublicNext
31/10/2020 04:01 pm