", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1736338058-savvv.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArunPrasadMandya" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಡ್ಯ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಪೂಜಾರಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಮಳವ...Read more" } ", "keywords": "Mandya News, KSRTC Bus Accident, Bike Accident, Road Mishap, Fatal Collision, Karnataka Road Accident, Mandya Traffic Accident, Two Priests Killed, KSRTC Bus Crash,Mandya,Accident", "url": "https://publicnext.com/article/nid/Mandya/Accident" }
ಮಂಡ್ಯ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಪೂಜಾರಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಮಳವಳ್ಳಿ ತಾಲ್ಲೂಕಿನ ಪಂಡಿತ ಹಳ್ಳಿ ಗ್ರಾಮದ ಬಳಿ ಜರುಗಿದೆ.
ಮಂಚನಹಳ್ಳಿ ಗ್ರಾಮದ ನಿವಾಸಿ ಮಾರಮ್ಮನ ದೇವಾಲಯದ ಪೂಜಾರಿಗಳಾದ 55 ವರ್ಷದ ನಾಗಸ್ವಾಮಿ ಹಾಗೂ 60 ವರ್ಷದ ದೊಡ್ಡಮಾದಯ್ಯ ಮೃತಪಟ್ಟ ದುರ್ದೈಗಳು. ಬುಧವಾರ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಮಂಚನಹಳ್ಳಿಯಿಂದ ಪಂಡಿತಹಳ್ಳಿ ಕಡೆಗೆ ತಮ್ಮ ಬೈಕ್‌ನಲ್ಲಿ ಬರುತ್ತಿದ್ದ ಇವರಿಗೆ ಮಳವಳ್ಳಿ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ತಲೆಗೆ ತೀವ್ರ ಪೆಟ್ಟು ಬಿದ್ದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.
PublicNext
08/01/2025 05:38 pm