ಮಂಡ್ಯ: ಸ್ಟೇರಿಂಗ್ ರಾಡ್ ಕಟ್ ಆದ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್‌ವೊಂದು ರಸ್ತೆ ಬದಿಯ ಜಮೀನಿಗೆ ನುಗ್ಗಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಅರಸೀಕೆರೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ, ಸಾರಿಗೆ ಸಂಸ್ಥೆ ಬಸ್‌ವೊಂದು ತೆರಳುತ್ತಿತ್ತು. ಈ ವೇಳೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಭಾರತ್ ಪೆಟ್ರೋಲ್ ಬಂಕ್ ಬಳಿ, ಸ್ಟೇರಿಂಗ್ ರಾಡ್ ಕಟ್ ಆಗಿ ಭತ್ತದ ಗದ್ದೆಗೆ ನುಗ್ಗಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು, ಕೂದಲೆಳೆ ಅಂತರದಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಗಾಯಾಳುಗಳನ್ನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
PublicNext
13/10/2022 07:47 pm