ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದೆ.
ಜಿಲ್ಲಾಧಿಕಾರಿಗಳಿಗೆ 2024- 25 ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ದೊರೆಯಲಿದೆ.
ಈ ಪ್ರಶಸ್ತಿಯನ್ನು ಜನವರಿ 25 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
22/01/2025 10:19 pm