ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ : ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್ ಶಾಸಕ ರವಿ ಗಣಿಗ ಸ್ಪೋಟಕ ಹೇಳಿಕೆ!

ಮಂಡ್ಯ : ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಶಾಸಕನಿಂದ ಮತ್ತೊಂದು ಹೊಸ ಬಾಂಬ್‌ ಹೊರ ಬಿದ್ದಿದೆ. ಆಪರೇಷನ್ ಕಮಲದ ಬಗ್ಗೆ ಶಾಸಕ ಗಣಿಗ ರವಿಕುಮಾರ್ ಸ್ಫೋಟಕ ಮಾಹಿತಿ ನೀಡಿದ್ದಾರೆ.

ಮಂಡ್ಯದಲ್ಲಿ ಈ ಕುರಿತು ಮಾತನಾಡಿರುವ ರವಿ ಗಣಿಗ, ಸರ್ಕಾರ ಕೆಡವಲು ಬಿಜೆಪಿಯಿಂದ 50 ಅಲ್ಲ 100 ಕೋಟಿ ಆಫರ್ ಇದೆ, ಶೀಘ್ರದಲ್ಲೇ ಆಪರೇಷನ್ ಕಮಲದ ಸಾಕ್ಷಿ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ.

ಬಿಜೆಪಿ-ಜೆಡಿಎಸ್ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನ ಬೀಳಿಸುವ ತವಕದಲ್ಲಿದ್ದಾರೆ.50 ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಲಾಗಿದೆ. 50ಕೋಟಿಗೆ ಬಗ್ಗಿಲ್ಲ ಎಂದು ಶಾಸಕರಿಗೆ ತಲಾ 100 ಕೋಟಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದರು.

ಕಳೆದ ಸರ್ಕಾರದಲ್ಲಿ ಲೂಟಿ ಮಾಡಿರುವ ಹಣದಿಂದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ಪ್ಲಾನ್ ಮಾಡಿದ್ದಾರೆ.ಕೆಲವರು ಪೆನ್‌ಡ್ರೈವ್ ತೋರಿಸಿ ರಿವಿಲ್ ಮಾಡಿಲ್ಲ, ನಾವು ತೋರಿಸಿದ್ರೆ ಖಂಡಿತ ರಿವಿಲ್ ಮಾಡ್ತೀವಿ. ನಮ್ಮ ಬಳಿ ಆಪರೇಷನ್ ಕಮಲಕ್ಕೆ ಸಂಬಂಧಿಸಿದ ಎಲ್ಲಾ‌ ದಾಖಲೆಗಳಿವೆ.

ಕಿತ್ತೂರು ಶಾಸಕ ಬಾಬಾ ಸಹೇಬ್ ದೇವನಗೌಡ ಪಾಟೀಲ್, ಚಿಕ್ಕಮಗಳೂರು ಶಾಸಕ ತಮ್ಮಣ್ಣರನ್ನ ಯಾಕೆ ಸಂಪರ್ಕಿಸಿದ್ರು,ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಮಾಹಿತಿ ಇದೆ. ಈ ಬಗ್ಗೆ ಆಡಿಯೋ, ವಿಡಿಯೋ, ಸಿಡಿ, ಪೆನ್‌ಡ್ರೈವ್ ಸೇರಿದಂತೆ ಮುಂದುವರಿದು ಐ ಕ್ಲೌಡ್ ಕೂಡ‌ ಇದೆ.ನಮ್ಮ ಶಾಸಕರನ್ನ ಎಲ್ಲೆಲ್ಲಿ ಸಂಪರ್ಕಿಸಿದ್ರು, ಏನೇನು ಆಫರ್ ಮಾಡಿದ್ರು ದಾಖಲೆ ಇದೆ.

ಶೀಘ್ರದಲ್ಲೇ ಮಾಧ್ಯಮಗಳ ಮೂಲಕ ದಾಖಲೆ ಬಿಡುಗಡೆ ಮಾಡ್ತೀನಿ ನಮ್ಮ ಶಾಸಕರ‌್ಯಾರು ಬಿಜೆಪಿ ಆಮಿಷಗಳಿಗೆ ಬಲಿಯಾಗಲ್ಲ.ನಾವೆಲ್ಲಾ ಒಗ್ಗಟ್ಟಾಗಿದ್ದೇವೆ, ಸರ್ಕಾರವೂ ಸ್ಥಿರವಾಗಿದೆ ಎಂದರು.

Edited By : Shivu K
PublicNext

PublicNext

18/11/2024 11:11 am

Cinque Terre

32.14 K

Cinque Terre

8