ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅತಿಕಾರಿಬೆಟ್ಟು ದೆಪ್ಪುಣಿ ಗುತ್ತು ರೈಲ್ವೆ ಸೇತುವೆ ಸಮೀಪ ಗೂಡ್ಸ್ ರೈಲು ಡಿಕ್ಕಿಯಾಗಿ ಗಂಭೀರ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಕವತ್ತಾರ್ ನಿವಾಸಿ, ಕೂಲಿಕಾರ್ಮಿಕ ರಾಜು(45) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರಾಜು ಅತಿಕಾರಿಬೆಟ್ಟು ಮೈಲೊಟ್ಟು ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಕೆಲಸ ಬಿಟ್ಟು ಮನೆಗೆ ಹಳಿಯಲ್ಲಿ ನಡೆದುಕೊಂಡು ಬರುತ್ತಿರುವಾಗ ರೈಲು ಡಿಕ್ಕಿ ಹೊಡೆದಿತ್ತು.
ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
10/10/2020 09:11 pm