ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲ್ಲಡ್ಕ ಸಮೀಪ ಅಪಘಾತ: ಗಾಯಾಳು ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದಲ್ಲಿ ನಡೆದ ಆಟೊ ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ.

ಮೆಲ್ಕಾರ್ ನಿವಾಸಿ ತಾರಾನಾಥ (35) ಮೃತಪಟ್ಟವರು. ಬುಧವಾರ ಸಂಜೆ ವೇಳೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿಯಿಂದ ಕಲ್ಲಡ್ಕ ಪೇಟೆಗೆ ತಾರಾನಾಥ ಅವರು ದ್ವಿಚಕ್ರವಾಹನದಲ್ಲಿ ಬರುವ ವೇಳೆ ಅಪಘಾತ ನಡೆದಿತ್ತು.

ಘಟನೆಯಲ್ಲಿ ತಾರಾನಾಥ ಅವರ ಹೊಟ್ಟೆಯ ಭಾಗಕ್ಕೆ ಗಾಯವಾಗಿದ್ದು ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಗುರುವಾರ ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

15/10/2020 04:11 pm

Cinque Terre

6.58 K

Cinque Terre

0

ಸಂಬಂಧಿತ ಸುದ್ದಿ