ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮತ್ತೆ ಆರಂಭಗೊಂಡಿದ್ದು, ಗುರುವಾರ ಮಧ್ಯರಾತ್ರಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದವರ ಮೇಲೆ ಒಂಟಿ ಸಲಗ ದಾಳಿ ಮಾಡಿದೆ.
ಈ ದಾಳಿಯಿಂದಾಗಿ ಕಾರಿನಲ್ಲಿದ್ದವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಿಂದ ಕಡೂರು ತಾಲೂಕಿನ ಬಿಲೇಚನಹಳ್ಳಿ ಗ್ರಾಮಕ್ಕೆ ಮಾರುತಿ 800 ಕಾರಿನಲ್ಲಿ ಹೋಗುತ್ತಿದ್ದ ಮೂವರ ಮೇಲೆ ಬಿಲೇಚನಹಳ್ಳಿ ಗ್ರಾಮದಲ್ಲಿ ರಸ್ತೆಗೆ ಅಡ್ಡ ಬಂದ ಒಂಟಿ ಸಲಗ ಏಕಾಏಕಿ ದಾಳಿ ಮಾಡಿದ್ದು, ದಾಳಿಯಿಂದಾಗಿ ಕಾರಿನಲ್ಲಿದ್ದ ಭರತ್, ಶರತ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಮಧು ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದೆ.
Kshetra Samachara
17/10/2020 08:32 pm