ಬಂಟ್ವಾಳ : ವಿಟ್ಲ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಬಳಿ ಇರುವ ವಾಣಿಜ್ಯ ಸಂಕೀರ್ಣವೊಂದರ ಎರಡು ಮಳಿಗೆಗಳು ಬೆಂಕಿಗೆ ಆಹುತಿಯಾಗಿವೆ.
ಪೈಂಟ್ ಅಂಗಡಿಯೊಂದಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ನೋಡಿ ಸ್ಥಳೀಯರು ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ.
ಕ್ರಮೇಣ ಬೆಂಕಿ ಪಕ್ಕದ ಬೇಕರಿಗೂ ತಗುಲಿದ್ದು, ಎರಡೂ ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.
ಇನ್ನೂ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸಿದರು.
ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಇಲ್ಲ.
Kshetra Samachara
20/10/2020 08:31 am