ಪುತ್ತೂರು: ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಮೃತಪಟ್ಟಿದ್ದು, ಮತ್ತೋರ್ವ ಬಾಲಕಿ ಹಾಗೂ ಮಹಿಳೆ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ದರ್ಬೆ ಬೈಪಾಸ್‌ನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಸ್ವಾತಿ (9) ಎಂದು ಗುರುತಿಸಲಾಗಿದೆ. ದರ್ಬೆ ಬೈಪಾಸ್ ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆಗೆ ಮಂಗಳೂರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದು ಬಳಿಕ ಎದುರಿನಲ್ಲಿ ನಿಂತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೋರ್ವ ಬಾಲಕಿ ಮತ್ತು ಮಹಿಳೆ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಅಪಘಾತ ನಡೆಸಿದ ಕಾರನ್ನು ವಶಕ್ಕೆ ಪಡೆದಿದ್ದಾರೆ.
Kshetra Samachara
02/11/2020 11:33 pm