ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಹೊನ್ನಕಟ್ಟೆ ಕುಳಾಯಿಯಲ್ಲಿ ಮಂಗಳವಾರ ಬೆಳಿಗ್ಗೆ ಕಾರು ಹೆದ್ದಾರಿಯ ಸಿಗ್ನಲ್ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ.
ಗಾಯಾಳು ಚಾಲಕನನ್ನು ಮುಸ್ತಾಫ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದ್ದು, ಅಪಘಾತದ ಭಾರಿ ಶಬ್ದಕ್ಕೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಅಪಘಾತದಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕೂಡಲೇ ಸುರತ್ಕಲ್ ಟ್ರಾಫಿಕ್ ಪೊಲೀಸರು ಸಂಚಾರ ತಡೆ ತೆರವುಗೊಳಿಸಿದ್ದಾರೆ.
Kshetra Samachara
03/11/2020 09:25 am