ಮುಲ್ಕಿ: ರಾ.ಹೆ. 66ರ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿಗೆ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡು ನರಳಾಡುತ್ತಿರುವಾಗ ಸ್ಥಳೀಯರು ಮತ್ತು ಹಳೆಯಂಗಡಿಯ ಪೂಜಾ ಅಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಗಾಯಾಳು ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಅಪಘಾತ ನಡೆದ ಕೂಡಲೇ ಲಾರಿ ಚಾಲಕ ಪರಾರಿಯಾಗಿದ್ದು, ಲಾರಿ ಹೆದ್ದಾರಿಯಲ್ಲಿ ಕೆಟ್ಟು ನಿಂತಿದೆ.
ಸ್ಥಳದಲ್ಲಿ ದಾರಿದೀಪ ಇಲ್ಲದಿದ್ದು ಸ್ಥಳದಲ್ಲಿ ಬ್ಯಾರಿಕೇಡರ್ ಇರಿಸಲಾಗಿದೆ. ಸುರತ್ಕಲ್ ಟ್ರಾಫಿಕ್ ಪೊಲೀಸರು, ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರು ಕಾರ್ಕಳ ಮೂಲದ ವರೆಂದು ತಿಳಿದು ಬಂದಿದ್ದು, ಶ್ರೀನಿವಾಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
Kshetra Samachara
13/11/2020 08:18 am