ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ತೆಂಕಿಲದಲ್ಲಿ ಬೈಕ್- ಜೀಪು ಡಿಕ್ಕಿ; ಬೈಕ್‌ ಸವಾರ ಸಾವು

ಪುತ್ತೂರು: ಬೈಕ್ ಮತ್ತು ಜೀಪಿನ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ನಗರದ ಬೈಪಾಸ್ ತೆಂಕಿಲದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಪರ್ಲಡ್ಕ ನಿವಾಸಿ ಹಸಿಮೀನು ವ್ಯಾಪಾರ ನಡೆಸುತ್ತಿರುವ ಹಂಝ ಹಾಜಿ ಎಂಬವರ ಪುತ್ರ ಮುಹಮ್ಮದ್ ಹಾಶಿಂ(20) ಮೃತಪಟ್ಟವರು.

ಹಾಶಿಂ ಚಲಾಯಿಸುತ್ತಿದ್ದ ಬೈಕ್ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಹಾಶಿಂ ಗಂಭೀರ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ.

ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

28/11/2020 01:39 pm

Cinque Terre

10.71 K

Cinque Terre

0

ಸಂಬಂಧಿತ ಸುದ್ದಿ