ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ಯಾಸ್ ಸಿಲಿಂಡರ್ ಸೋರಿಕೆ:ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ...!

ಮಂಗಳೂರು:ಬೈಕಂಪಾಡಿಯಿಂದ ಕೇರಳ ಕಡೆಗೆ ಅಡುಗೆ ಅನಿಲ ಸಿಲಿಂಡರ್ ಸಾಗಾಟ ನಡೆಸುತ್ತಿದ್ದ ಸಂದರ್ಭ ಒಂದು ಸಿಲಿಂಡರ್ ನಲ್ಲಿ ಅನಿಲ ಸೋರಿಕೆ ಉಂಟಾದ ಘಟನೆ ರಾ.ಹೆ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ನಡೆದಿದೆ. ಚಾಲಕನ ಮುಂಜಾಗ್ರತೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.

ಅಡುಗೆ ಅನಿಲದ ಲೋಡಿನಲ್ಲಿ ಒಂದು ಸಿಲಿಂಡರ್ ನಲ್ಲಿ ಸೋರಿಕೆ ಉಂಟಾಗಿತ್ತು. ಇದು ಚಾಲಕನ ಗಮನಕ್ಕೆ ಬಂದಿದ್ದು ಕೂಡಲೇ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಪೊಲೀಸ್ ಇಲಾಖೆ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗೆ

ಕರೆ ಮಾಡಿ ತಿಳಿಸಿದ್ದಾನೆ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನ ಸಂಚಾರವನ್ನು ಕೆಲವು ಸಮಯ ಸ್ಥಗಿತಗೊಳಿಸಿದರು. ಇದರಿಂದ ತೊಕ್ಕೊಟ್ಟು ಜಂಕ್ಷನ್ ಕೆಲ ಕ್ಷಣ ಸ್ತಬ್ಧವಾಗಿತ್ತು. ಬಳಿಕ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಸಿಲಿಂಡರ್ ಅನ್ನು ದೂರದಲ್ಲಿ ಇಟ್ಟು ಅನಿಲ ಸೋರಿಕೆಯನ್ನು ತಡೆಹಿಡಿದರು. ಚಾಲಕನ ಹಾಗೂ ಅಗ್ನಿ ಶಾಮಕದಳದ ತುರ್ತು ಕಾರ್ಯಾಚರಣೆಯಿಂದ ದೊಡ್ಡ ಮಟ್ಟ ಅನಾಹುತ ತಪ್ಪಿದೆ..

Edited By : Nagaraj Tulugeri
Kshetra Samachara

Kshetra Samachara

10/12/2020 08:21 pm

Cinque Terre

9.18 K

Cinque Terre

0

ಸಂಬಂಧಿತ ಸುದ್ದಿ