ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಸಹಿತ ಹಲವರಿಗೆ ಆರೆಸ್ಸೆಸ್ ಮಾರ್ಗದರ್ಶಕರಾಗಿದ್ದ ಆರೆಸ್ಸೆಸ್ ಮುಖಂಡ ವೆಂಕಟರಮಣ ಹೊಳ್ಳ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಪೋಳ್ಯ ಎಂಬಲ್ಲಿ ಮಂಗಳವಾರ ಮುಂಜಾವ ನಡೆದ ರಸ್ತೆ ಅಪಘಾತದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರೂ, ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿರುವ ವೆಂಕಟರಮಣ ಹೊಳ್ಳ ಸ್ಥಳದಲ್ಲೇ ಸಾವನ್ನಪ್ಪಿದರು. ಸೋಮವಾರ ಬೈಠಕ್ ಮುಗಿಸಿ, ಪುತ್ತೂರಿನಲ್ಲೇ ತಂಗಿದ್ದ ಅವರು, ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಿ.ಸಿ.ರೋಡಿನ ಅಗ್ರಬೈಲ್ ನಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಸಂದರ್ಭ ಪೋಳ್ಯದಲ್ಲಿ ಅಪಘಾತ ಸಂಭವಿಸಿದೆ.
ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಬೈಕ್ ಬಿದ್ದಿತ್ತು. ಆರೆಸ್ಸೆಸ್ ಸ್ವಯಂಸೇವಕರಾಗಿ ಬಾಲ್ಯದಿಂದಲೇ ಗುರುತಿಸಿಕೊಂಡಿದ್ದ ಅವರು, ರಾಷ್ಟ್ರೀಯ ನಾಯಕರ ಗಮನವನ್ನೂ ಸೆಳೆದವರು. ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ವೆಂಕಟರಮಣ ಹೊಳ್ಳರು ಗುರು, ಮಾರ್ಗದರ್ಶಕರಾಗಿದ್ದರು. ಅವರ ಮನೆಯಲ್ಲಿಯೇ ಸಂಘದ ಶಿಕ್ಷಣವನ್ನು ನಳಿನ್ ಪಡೆದಿದ್ದರು. ಅದೇ ರೀತಿ ಸಾವಿರಾರು ಯುವಕರಿಗೆ ಹೊಳ್ಳರು ಮಾರ್ಗದರ್ಶನ ನೀಡಿದ್ದಾರೆ. ಬಿ.ಸಿ.ರೋಡಿನ ಹೃದಯಭಾಗದಲ್ಲಿಯೇ ಶುದ್ಧ ಸಾವಯವ ಕೃಷಿ ಮಾಡುವ ಮೂಲಕ ಸಾವಯವ ಪ್ರಗತಿಪರ ಕೃಷಿಕರಾಗಿಯೂ ಹೊಳ್ಳರು ಗಮನ ಸೆಳೆದವರು. ಅವರ ನಿಧನಕ್ಕೆ ಆರೆಸ್ಸೆಸ್ ಪ್ರಮುಖರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಸಹಿತ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಎಂಬಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡರೊಬ್ಬರು ಮೃತಪಟ್ಟಿದ್ದಾರೆ.
Kshetra Samachara
15/12/2020 11:50 am