ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಭಾನುವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸುರತ್ಕಲ್ ಸಮೀಪದ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಅಝೀಮ್(20) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೈಕ್ ಸವಾರ ಸುರತ್ಕಲ್ ಕಾಟಿಪಳ್ಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ ಒಳ ರಸ್ತೆಯಿಂದ ಏಕಾಏಕಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಬೈಕ್ ಸವಾರ ಸಿನಿಮೀಯ ಮಾದರಿಯಲ್ಲಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
Kshetra Samachara
15/12/2020 06:29 pm