ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಸರಕಾರಿ ಬಸ್ ಗಳ ಗುದ್ದಾಟ; ಕೆಲ ಪ್ರಯಾಣಿಕರಿಗೆ ಗಾಯ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಎದುರುಗಡೆ ಸರಕಾರಿ ಬಸ್ಸುಗಳ ನಡುವೆ ಅಪಘಾತ ನಡೆದಿದ್ದು, ಗಾಯಾಳುಗಳ ಬಗ್ಗೆ ವಿವರ ತಿಳಿದು ಬಂದಿಲ್ಲ.

ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿ ಬಳಿ ಮಂಗಳೂರು ಡಿಪೋ ಸರಕಾರಿ ಬಸ್ಸಿನ (ಕೆ ಎ 19 ಎಫ್3376)ಹಿಂಭಾಗಕ್ಕೆ ಉತ್ತರ ಕರ್ನಾಟಕ ದ ಸರಕಾರಿ ಬಸ್(ಕೆ17 f19 28)ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಮಂಗಳೂರು ಡಿಪೋ ಬಸ್ಸು ಹೆದ್ದಾರಿಯಿಂದ ಚರಂಡಿಗೆ ಸರಿದಿದ್ದು, ಗಾಯಾಳುಗಳ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಾಗಿದೆ.

ಅಪಘಾತದ ರಭಸಕ್ಕೆ 2 ಬಸ್ಸುಗಳಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

05/10/2020 07:31 am

Cinque Terre

14.34 K

Cinque Terre

1

ಸಂಬಂಧಿತ ಸುದ್ದಿ