ಸುರತ್ಕಲ್: ಇಲ್ಲಿನ ಕುತ್ತೆತ್ತೂರಿನ ಪ್ರತಿಷ್ಠಿತ ಮನೆತನವಾಗಿರುವ ಬೈದಪುಳಿತ್ತೂರು ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮನೆ ಸಂಪೂರ್ಣ ಸುಟ್ಟು ಹೋಗಿದೆ.
ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ ಘಟನೆ ನಡೆದಿದ್ದು, ಸ್ಥಳೀಯರೊಬ್ಬರು ಮನೆ ಉರಿಯುತ್ತಿರುವುದನ್ನು ಮನೆ ಸದಸ್ಯ ನಾಗೇಶ್ ಅವರಿಗೆ ಮೊಬೈಲ್ ಕರೆ ಮಾಡಿ ತಿಳಿಸಿದ್ದರು. ಅವರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಮನೆ ಸಂಪೂರ್ಣ ಹೊತ್ತಿ ನಾಶವಾಗಿತ್ತು.
ಘಟನೆಯಿಂದ ಮನೆಯಲ್ಲಿದ್ದ ಅಮೂಲ್ಯ ವಸ್ತು ಸಹಿತ 18 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Kshetra Samachara
05/10/2020 05:09 pm