ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ದೇವಸ್ಥಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾತ ಸಾವು

ಕುಂದಾಪುರ: ದೇವಸ್ಥಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಗಂಗೊಳ್ಳಿ ಖಾರ್ವಿಕೇರಿಯ ಮಹಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ನಿನ್ನೆ ಈ ಘಟನೆ ನಡೆದಿತ್ತು.ಮಹಾಲಯ ಅಮಾವಾಸ್ಯೆ ಪ್ರಯುಕ್ತ ಭಕ್ತರು ಪೂಜಾ ಕಾರ್ಯದಲ್ಲಿದ್ದಾಗ ಖಾರ್ವಿಕೇರಿಯ ದಾಕಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(34) ಏಕಾಏಕಿ ದೇವಸ್ಥಾನಕ್ಕೆ ನುಗ್ಗಿ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡಿದ್ದರು.

ರಕ್ಷಣೆಗೆ ಧಾವಿಸಿದ ಜನಾರ್ದನ ಮತ್ತು ಲಕ್ಷ್ಮಣ್ ಖಾರ್ವಿಗೂ ಬೆಂಕಿ ತಗುಲಿ ಗಾಯವಾಗಿತ್ತು. ಘಟನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರಾಘವೇಂದ್ರ ಖಾರ್ವಿ‌ ಸ್ಥಿತಿ ಗಂಭೀರವಾಗಿತ್ತು.ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದ ಹಿನ್ನಲೆಯಲ್ಲಿ ಇಂದು ರಾಘವೇಂದ್ರ ಮೃತಪಟ್ಟಿದ್ದಾರೆ.ಇವರು ದೇವಸ್ಥಾನದ ಪಾತ್ರಿಯಾಗಲು ಇಚ್ಛಿಸಿದ್ದರು ಎನ್ನಲಾಗಿದೆ.

ದೇವಸ್ಥಾನದವರು ಅವಕಾಶ ನೀಡದ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

18/09/2020 01:33 pm

Cinque Terre

13.43 K

Cinque Terre

0

ಸಂಬಂಧಿತ ಸುದ್ದಿ