ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಪಕ್ಷಿಕೆರೆ ಬಳಿ ಓಮ್ನಿ- ಟೆಂಪೋ ಡಿಕ್ಕಿ; ಓಮ್ನಿ ಚಾಲಕ ಪವಾಡಸದೃಶ ಪಾರು

ಮುಲ್ಕಿ: ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿ ಓಮ್ನಿ ಮತ್ತು ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಓಮ್ನಿ ಚಾಲಕ ಪವಾಡಸದೃಶ ಪಾರಾಗಿದ್ದಾನೆ.

ಕಿನ್ನಿಗೋಳಿ ಕಡೆಯಿಂದ ಹಳೆಯಂಗಡಿ ಕಡೆಗೆ ಹೋಗುತ್ತಿದ್ದ ಓಮ್ನಿಗೆ ಪಕ್ಷಿಕೆರೆ ಜಂಕ್ಷನ್ ಬಳಿ ಬೈಕ್ ಸವಾರನೊಬ್ಬ ಅಡ್ಡ ಬಂದಿದ್ದು, ಅಪಘಾತ ತಪ್ಪಿಸಲು ಹೋಗಿ ಓಮ್ನಿ ಚಾಲಕ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ 407 ಟೆಂಪೋಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಓಮ್ನಿ ನಜ್ಜುಗುಜ್ಜಾಗಿದ್ದು, ಚಾಲಕ ಮನೋಜ್ ಅವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡಸದೃಶ ಪಾರಾಗಿದ್ದಾರೆ. ಅಪಘಾತದ ಸ್ಥಳದಿಂದ ಬೈಕ್ ಸವಾರ ಪರಾರಿಯಾಗಿದ್ದಾನೆ. ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

05/01/2021 03:53 pm

Cinque Terre

18.26 K

Cinque Terre

0

ಸಂಬಂಧಿತ ಸುದ್ದಿ