ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಿಯರ್ ಲಾರಿ ಪಲ್ಟಿ; 'ಅಮಲು ಪ್ರಿಯ'ರು ಬಾಟಲಿ ಸಹಿತ ಪರಾರಿ

ಸುಳ್ಯ: ಮೈಸೂರಿನಿಂದ ಮಂಗಳೂರಿಗೆ ಬಿಯರ್ ಸಾಗಿಸುತ್ತಿದ್ದ ಲಾರಿಯೊಂದು ಸುಳ್ಯ ತಾಲೂಕಿನ ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

ಲಾರಿಯಲ್ಲಿ ಸುಮಾರು 45 ಲಕ್ಷ ರೂ. ಮೌಲ್ಯದ ಬಿಯರ್ ಇತ್ತೆನ್ನಲಾಗಿದೆ.

ಬಿಯರ್ ಲಾರಿ ಸಂಪೂರ್ಣ ಮಗುಚಿ ಬಿದ್ದಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ವಿಷಯ ಗೊತ್ತಾಗುತ್ತಿದ್ದಂತೆಯೇ ಕೆಲವು ಮಂದಿ 'ಅಮಲು ಪ್ರಿಯರು' ಸ್ಥಳದಲ್ಲಿ ಬಿಯರ್ ಸಂಗ್ರಹಿಸಿ ಪರಾರಿಯಾಗಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

17/01/2021 12:33 pm

Cinque Terre

14.52 K

Cinque Terre

1

ಸಂಬಂಧಿತ ಸುದ್ದಿ