ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲ್ಲಡ್ಕದಲ್ಲಿ ಅಪಘಾತ: ಗ್ಯಾಸ್ ಟ್ಯಾಂಕರ್, ಕಂಟೈನರ್ ಡಿಕ್ಕಿ

ಬಂಟ್ವಾಳ: ಸೂರಿಕುಮೇರುವಿನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸುಮಾರು 10 ಗಂಟೆ ವಾಹನ ಸಂಚಾರ ಅಡಚಣೆಯ ಸಮಸ್ಯೆಯ ಬೆನ್ನಲ್ಲೇ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ಮತ್ತೊಂದು ಅಪಘಾತ ಸಂಭವಿಸಿದೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಖಾಲಿಯಾಗಿರುವ ಅನಿಲ ಟ್ಯಾಂಕರ್ ಮತ್ತು ಕಂಟೈನರ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ಬುಧವಾರ ರಾತ್ರಿ ನಿರ್ಮಾಣವಾಯಿತು. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ. ಆದರೆ ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅಪಾಯ ಎದುರಾಗಿಲ್ಲ.

ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ಬುಧವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಯಾರಿಗೂ ಗಾಯಗಳುಂಟಾಗಿಲ್ಲ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್.ಐ. ರಾಜೇಶ್ ಕೆ.ವಿ. ಮತ್ತು ಸಿಬ್ಬಂದಿ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಬುಧವಾರ ಸಂಜೆಯಷ್ಟೇ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಗ್ಯಾಸ್ ಟ್ಯಾಂಕರ್ ವಾಹನ ಚಾಲಕರ ಸುರಕ್ಷಿತ ಚಾಲನೆ ಕುರಿತು ಕಟ್ಟುನಿಟ್ಟಿನ ಕ್ರಮ ಹಾಗೂ ರಾತ್ರಿ ಸಂಚಾರದ ನಿರ್ಬಂಧಗಳ ಕುರಿತು ಚರ್ಚಿಸಿದ್ದರು.

Edited By : Nagaraj Tulugeri
Kshetra Samachara

Kshetra Samachara

03/02/2021 10:50 pm

Cinque Terre

11.87 K

Cinque Terre

0

ಸಂಬಂಧಿತ ಸುದ್ದಿ