ಮಂಗಳೂರು: ಕಾರು ಹಾಗೂ ಮೀನಿನ ಲಾರಿ ನಡುವೆ ನಡೆದ ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಸಂಭವಿಸಿದೆ.ಪೋಲಿಸ್ ಮೂಲಗಳ ಪ್ರಕಾರ ಶನಿವಾರ ಬೆಳಿಗ್ಗೆ 5.15 ರ ಸುಮಾರಿಗೆ ಕತ್ತಲ್ ಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದು, ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿಯನ್ನು ಗಮನಿಸದೆ, ಕಾರು ಡಿಕ್ಕಿ ಹೊಡೆದಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕತ್ತಲ್ ಸಾರ್ ಅವರಿಗೆ ತಲೆಗೆ ಗಾಯಗಳಾಗಿದ್ದುನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Kshetra Samachara
06/02/2021 11:04 am