ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಕೆಳಬದಿಯ ಮೀನು ಮಾರುಕಟ್ಟೆಗೆ ಹೋಗುವ ಕ್ರಾಸ್ ಬಳಿ ಟಿಪ್ಪರ್ ಗೆ ಲಾರಿ ಡಿಕ್ಕಿಯಾಗಿದೆ.
ಕಿನ್ನಿಗೋಳಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಟಿಪ್ಪರ್ ಮುಲ್ಕಿ ಬಸ್ ನಿಲ್ದಾಣದ ಬಳಿ ಏಕಾಏಕಿ ಮೀನು ಮಾರುಕಟ್ಟೆ ರಸ್ತೆಗೆ ತಿರುವು ಪಡೆದುಕೊಂಡಿದ್ದು ಹೆದ್ದಾರಿಯಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಎದುರು ಭಾಗ ಜಖಂಗೊಂಡಿದೆ. ಅಪಘಾತ ಸಂದರ್ಭ ಲಾರಿ ಚಾಲಕ ಪವಾಡಸದೃಶ ಪಾರಾಗಿದ್ದಾರೆ. ಅಪಘಾತದಿಂದ ಕೆಲಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Kshetra Samachara
07/02/2021 11:07 pm