ಮಂಗಳೂರು : ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಸಮೀಪ ಕೆಸ್ ಆರ್ ಟಿ ಸಿ ಬಸ್ ಮತ್ತು ಅಲ್ಟೋ ಕಾರ್ ನಡುವೆ ಮುಖಾಮುಖಿ ಸಂಭವಿಸಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಕ್ಕಡದ ಪಟ್ರಮೆಯ ನಿವಾಸಿಗಳು ಆಲ್ಟೋ ಕಾರಿನಲ್ಲಿದ್ದರು.ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
13/02/2021 04:26 pm