ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಜಂಕ್ಷನ್ ಬಳಿ ಕಾರಿಗೆ ಗೂಡ್ಸ್ ರಿಕ್ಷಾ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರ ಪವಾಡಸದೃಶ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಮುಲ್ಕಿಯ ಬಪ್ಪನಾಡು ಜಂಕ್ಷನ್ ತಲುಪುತ್ತಿದ್ದಂತೆ ಹೆದ್ದಾರಿ ಒಳಗಿನಿಂದ ಕ್ರಾಸ್ ಮಾಡುತ್ತಿದ್ದ ಗೂಡ್ಸ್ ರಿಕ್ಷಾಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಿಂದ ಕಾರಿನ ಎದುರು ಭಾಗ ಜಖಂಗೊಂಡಿದ್ದು ಗೂಡ್ಸ್ ರಿಕ್ಷಾಗೆ ಕೂಡ ಹಾನಿಯಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಗೊಂಡ ಬಳಿಕ ಸೂಕ್ತ ಸರ್ವಿಸ್ ರಸ್ತೆ ಇಲ್ಲದೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಬಪ್ಪನಾಡು ಜಂಕ್ಷನ್, ಮೂಲ್ಕಿ ಬಸ್ ನಿಲ್ದಾಣ, ವಿಜಯ ಸನ್ನಿಧಿ ಜಂಕ್ಷನ್ ಬಳಿ ಅನೇಕ ಅಪಘಾತಗಳು ಸಂಭವಿಸಿದ್ದು ಹೆದ್ದಾರಿ ಇಲಾಖೆ ಎಚ್ಚೆತ್ತು ಆದಷ್ಟು ಬೇಗ ಸರ್ವಿಸ್ ರಸ್ತೆ ಕಾಮಗಾರಿ ನಡೆಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.
Kshetra Samachara
29/04/2022 12:27 pm