ಬಜಪೆ:ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭ ಟ್ರ್ಯಾಕ್ಟರೊಂದು ಪಲ್ಟಿಯಾಗಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ಮುಚ್ಚೂರು ಸಮೀಪದ ಕೊಂಪದವು ಎಂಬಲ್ಲಿ ನಡೆದಿದೆ.
ಕೊಂಪದವು ಗ್ರಾಮದ ಪ್ರಗತಿಪರ ಕೃಷಿಕರಾಗಿದ್ದ ತಾರಾನಾಥ ಶೆಟ್ಟಿ(46)ಮೃತರು.
ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಅವರ ಮೇಲೇಯೇ ಬಿದ್ದಿದೆ.ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿದ ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದರು.
ಮೃತರು ಪತ್ನಿ,ಪುತ್ರಿ ಹಾಗೂ ಪುತ್ರನನ್ನು ಆಗಲಿದ್ದಾರೆ. ಘಟನೆಯ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
30/05/2022 10:33 am