ಗಂಜಿಮಠ:ಕೃಷಿಕರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ವಿಕ - ಸೂಪರ್ ಸ್ಟಾರ್ ರೈತ - 2021' ನಾಲ್ಕನೇ ಆವೃತ್ತಿಯ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸಾಧಕ ರೈತರಿಗೆ ಪುರಸ್ಕಾರ ಕಾರ್ಯಕ್ರಮ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ರವರ ಗಂಜಿಮಠದಲ್ಲಿರುವ ಒಡ್ಡೂರು ಫಾರ್ಮ್ ನಲ್ಲಿ ನಡೆಯಿತು. ಶಾಸಕ ಡಾ.ವೈ ಭರತ್ ಶೆಟ್ಟಿಯವರು ಗೋವುಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂಎನ್ ರಾಜೇಂದ್ರ ಕುಮಾರ್, ರಾಮಕೃಷ್ಣ ಮಠದ ಶ್ರೀ ಶ್ರೀ ಏಕಗಮ್ಯಾನಂದ ಮಹಾರಾಜ್, ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಸಹಿತ ಗಣ್ಯರು ಉಪಸ್ಥಿತರಿದ್ದರು.
Kshetra Samachara
22/01/2022 06:37 am