ಮಂಗಳೂರು: ಜಿಲ್ಲಾ ಕೆನರಾ ಬ್ಯಾಂಕ್ ಆಶ್ರಯದಲ್ಲಿ ದ.ಕ. ಜಿಲ್ಲಾ ಬ್ಯಾಂಕ್‌ಗಳ ಪರಿಶೀಲನೆ ಸಮಿತಿ ಸಭೆ ಜಿಪಂ ಸಿಇಒ ಡಾ.ಆರ್. ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಈ ವೇಳೆ ಮಾತನಾಡಿದ ಸಿಇಒ ಸೆಲ್ವಮಣಿ, ಜಿಲ್ಲೆಯ ಯಾವುದೇ ಬ್ಯಾಂಕ್‌ಗಳು ಸಾರ್ವಜನಿಕರು ಜನ್‌ಧನ್ ಖಾತೆ ತೆರೆಯಲು ಬಯಸಿದಲ್ಲಿ ನಿರಾಕರಿಸಬಾರದು ಎಂದು ಸೂಚಿಸಿದರು. ಸರಕಾರದ ಯೋಜನೆಗಳ ಅನುಷ್ಠಾನಕ್ಕೆ ಬ್ಯಾಂಕ್‌ಗಳು ಹೆಚ್ಚಿನ ಒತ್ತು ನೀಡಬೇಕು. ಅಲ್ಲದೆ, ಫಲಾನುಭವಿಗಳು ಸಲ್ಲಿಸುವ ಅರ್ಜಿಗಳನ್ನು ಬಾಕಿ ಇಡದೇ ಶೀಘ್ರ ಇತ್ಯರ್ಥಗೊಳಿಸಬೇಕು ಎಂದರು.
ಸಲ್ಲಿಕೆಯಾಗುವ ಅರ್ಹ ಅರ್ಜಿಗಳಿಗೆ ಗುರುತಿಸಿ ಶೀಘ್ರ ಸಾಲ ಮಂಜೂರು ಮಾಡಬೇಕು. ಮಂಜೂರು ಮಾಡಲು ಸಾಧ್ಯ ವಾಗದ ಅರ್ಜಿಗಳನ್ನು ಬ್ಯಾಂಕಿನಲ್ಲಿ ಬಾಕಿ ಇರಿಸಿಕೊಳ್ಳದೆ ಅರ್ಜಿದಾರರಿಗೆ ಕಾರಣ ಸಹಿತ ಮಾಹಿತಿ ನೀಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
28/09/2020 10:51 pm