ಮುಲ್ಕಿ: ಕಿನ್ನಿಗೋಳಿ ಲಯನ್ಸ್ ಕ್ಲಬ್‌ನ ಪದಗ್ರಹಣ ಸಮಾರಂಭ ಕಿನ್ನಿಗೋಳಿ ಚರ್ಚ ಸಭಾಂಗಣದಲ್ಲಿ ನಡೆಯಿತು.
ಪದಗ್ರಹಣದ ಅಧಿಕಾರಿ ಡಾ. ಮೆಲ್ವಿನ್ ಡಿಸೋಜ 2000-21 ಹಾಗೂ 2021-22ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣವನ್ನು ನೆರವೇರಿಸಿ ಮಾತನಾಡಿ, ಕೊರೊನಾ ದಿನಗಳಲ್ಲಿ ಸಂಕಷ್ಟಕ್ಕೀಡಾದವರಿಗೆ ಸಹಾಯ ಹಸ್ತ ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಂಘಟನೆಯ ಹಿರಿಮೆ ಶಿಖರಕ್ಕೇರಲಿ ಎಂದು ಶುಭ ಹಾರೈಸಿದರು.
ಕಿನ್ನಿಗೋಳಿ ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಹಿಲ್ಡಾ ಡಿಸೋಜ, ಕಾರ್ಯದರ್ಶಿಯಾಗಿ ಫ್ರಾನ್ಸಿಸ್ ಸೆರಾವೋ, ಖಜಾಂಚಿಯಾಗಿ ಪ್ರಮೀಳಾ ಅಧಿಕಾರ ಸ್ವೀಕರಿಸಿದರು. ಸೇವಾ ಕಾರ್ಯಕ್ರಮದ ಅಂಗವಾಗಿ 10 ಬಡಕುಟುಂಬಗಳಿಗೆ ಆಹಾರ ಕಿಟ್ ವಿತರಣೆ, ಪೋಂಪೈ ಕಾಲೇಜಿನ ಬಡ ವಿದ್ಯಾರ್ಥಿಗಳಿಗೆ ಧನಸಹಾಯ, ಮನೆ ನಿರ್ಮಾಣಕ್ಕೆ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಧನಸಹಾಯ ನೀಡಲಾಯಿತು.
Kshetra Samachara
02/08/2021 09:51 pm