ಸುರತ್ಕಲ್: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಉಚಿತ ಆಹಾರ ಧಾನ್ಯಗಳ ಕಿಟ್ ವಿತರಣಾ ಕಾರ್ಯಕ್ರಮ ಸುರತ್ಕಲ್ ವಿಶ್ವಕರ್ಮ ಹೌಲ್ ನಲ್ಲಿ ನಡೆಯಿತು.
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಫಲಾನುಭವಿಗಳಿಗೆ ಕಿಟ್ ವಿತರಿಸಿದರು. ಸುರತ್ಕಲ್ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ದ ಅಧ್ಯಕ್ಷರಾದ ಶಿವ ಶಂಕರ ಆಚಾರ್ಯ, ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ವರುಣ್ ಚೌಟ, ಕಿರಣ್ ಕುಮಾರ್ ಕೋಡಿಕಲ್, ಸರಿತಾ ಶಶಿಧರ್, ಲಕ್ಷ್ಮೀ ಶೇಖರ್ ದೇವಾಡಿಗ, ಶೋಭಾ ರಾಜೇಶ್, ವೇದಾವತಿ, ನಯನ ಆರ್ ಕೊಟ್ಯಾನ್, ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ಮಹೇಶ್ ಮೂರ್ತಿ ಸುರತ್ಕಲ್, ವಿಠ್ಠಲ್ ಸಾಲ್ಯಾನ್ ಉಪಸ್ಥಿತರಿದ್ದರು.
Kshetra Samachara
30/08/2021 03:37 pm