ಮುಲ್ಕಿ:ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಗ್ರಾಮ ಪಂಚಾಯತ್ ಪಡುಪಣಂಬೂರು ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್ ಮಾರ್ಗದರ್ಶನದಲ್ಲಿ 10ನೇತೋಕೂರು ಫೇಮಸ್ ಯೂತ್ ಕ್ಲಬ್ (ರಿ) ಹಾಗೂ ಮಹಿಳಾ ಮಂಡಲ ಜಂಟಿ ಆಶ್ರಯದಲ್ಲಿ ಕೋವಿಶೀಲ್ಡ್ ಲಸಿಕೆಯ ಮೊದಲನೇ, ಎರಡನೇ ಹಾಗೂ ಬೂಸ್ಟರ್ ಡೋಸ್ ಕಾರ್ಯಕ್ರಮ ಸಂಸ್ಥೆಯ ಕಾರ್ಯಾಲಯದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ಬಿನ ಕಾರ್ಯದರ್ಶಿ ಹಿಮಕರ ಕೋಟ್ಯಾನ್ ಸದಸ್ಯ ಮೋಹನ್ ದಾಸ್ ಮತ್ತು ಮಹಮ್ಮದ್ ಶರೀಫ್, ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಸಹಾಯಕಿ ಮಾರ್ಗರೇಟ್ ಸುದರ್ಶಿನಿ, ಆಶಾ ಕಾರ್ಯಕರ್ತೆಯರಾದ ಯಶೋದ ಮತ್ತು ಲತಾ ಉಪಸ್ಥಿತರಿದ್ದರು.
ಶಿಬಿರದಲ್ಲಿ ಒಟ್ಟು 55 ಜನರಿಗೆ ಕೋವಿಡ್ ಲಸಿಕೆಯನ್ನು ನೀಡಲಾಯಿತು. ಮನೆ ಮನೆಗಳಿಗೆ ತೆರಳಿ ಲಸಿಕೆಯನ್ನು ನೀಡಿ ಜನರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.
Kshetra Samachara
28/04/2022 07:06 pm