ಮುಲ್ಕಿ ಪಡುಪಣಂಬೂರು ಗ್ರಾಮ ಪಂಚಾಯತ್ ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾರ್ಗದರ್ಶನದಲ್ಲಿ ಮತ್ತು ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜನ್ಮದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕ್ಲಬ್ಬಿನ ಕಾರ್ಯಾಲಯದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ನೆಹರು ಯುವ ಕೇಂದ್ರದ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್ ಪೇಟೆ ಚಾಲನೆ ನೀಡಿ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಯುವ ಸಂಘಟನೆಗಳ ಪಾತ್ರ ಬಹಳಷ್ಟು ಹಿರಿದು, ಫೇಮಸ್ ಯೂತ್ ಕ್ಲಬ್ ನ ನಿರಂತರವಾದ ಸೇವೆ ಶ್ಲಾಘನೀಯ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಕೆಮ್ರಾಲ್ ನ ಕಿರಿಯ ಸಹಾಯಕ ಶುಶ್ರೂಷಕಿ ಮಾರ್ಗರೇಟ್ ಸುದರ್ಶಿನಿ ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕಿರಿಯ ಶುಶ್ರೂಷಕಿ ಮಂಜುಳಾ, ಆಶಾ ಕಾರ್ಯಕರ್ತೆಯರಾದ ಯಶೋಧ ಹಾಗೂ ರೇಖಾ, ನೆಹರು ಯುವ ಕೇಂದ್ರದ ಪ್ರತಿನಿಧಿ ಕುಮಾರಿ ರಕ್ಷಾ, ಫೇಮಸ್ ಯೂತ್ ಕ್ಲಬ್ ನ ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರು ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್ ಉಪಸ್ಥಿತರಿದ್ದರು.
ಆರೋಗ್ಯ ತಪಾಸಣಾ ಶಿಬಿರದಲ್ಲಿ ಉಚಿತವಾಗಿ ಬಿ.ಪಿ, ಶುಗರ್ ತಪಾಸಣೆ, ಕೋವಿಡ್ ಲಸಿಕೆ ಕೋವೀಶೀಲ್ಡ್ ನ 2 ನೇ ಡೋಸ್ ಮತ್ತು ಬೂಸ್ಟರ್ ಡೋಸನ್ನು ನೀಡಲಾಯಿತು. ಸಂಸ್ಥೆಯ ಕಾರ್ಯದರ್ಶಿ ಹಿಮಕರ್ ಕೋಟ್ಯಾನ್ ನಿರೂಪಿಸಿದರು.
Kshetra Samachara
06/07/2022 04:10 pm