ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಹಿರೇಬಂಡಾಡಿಯಲ್ಲಿ ನಡೆದಿದೆ.
ಹಿರೇಬಂಡಾಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ದಿನೇಶ್ ಶೆಟ್ಟಿ ಅವರಿಗೆ ಆರೋಪಿ ಲೋಕೇಶ್ ಗೌಡ ಪೆಲತ್ತಡಿ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ದೂರು ನೀಡಿರುವ ಅಧಿಕಾರಿ ದಿನೇಶ್, 'ಲೋಕೇಶ್ ಅ.5ರಂದು ಗ್ರಾ.ಪಂ. ಕಚೇರಿಗೆ ಬಂದಿದ್ದ. ಆಗ ನನಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಷ್ಟೇ ಅಲ್ಲದೆ ಅ.6ರಂದು ಮತ್ತೆ ಬಂದ ಆತ ಬೆದರಿಕೆ ಹಾಕಿದ್ದಾನೆ' ಎಂದು ತಿಳಿಸಿದ್ದಾರೆ.
ಲೋಕೇಶ್ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಕಾಂಕ್ರೀಟ್ ಹಾಕಲಾಗಿದ್ದು, ಕ್ಯೂರಿಂಗ್ ಆಗುವ ಉದ್ದೇಶದಿಂದ ವಾಹನಗಳು ಸಂಚರ ತಡೆಲು ರಸ್ತೆಗೆ ಅಡ್ಡಲಾಗಿ ಮರದ ಬೇಲಿಯನ್ನು ಹಾಕಲಾಗಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಲೋಕೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಅಭಿವೃದ್ಧಿ ಅಧಿಕಾರಿ ದಿನೇಶ್ ಶೆಟ್ಟಿ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.
Kshetra Samachara
08/10/2020 07:11 pm