ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಳದ ಸರ್ಪ ಸಂಸ್ಕಾರ ಕ್ರಿಯಾಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ಮಯ್ಯ ಭಟ್ (55) ಗುರುವಾರ ಸಂಜೆ ವೇಳೆ ನೇಣಿಗೆ ಶರಣಾಗಿದ್ದಾರೆ.
ಉಪ್ಪಿನಂಗಡಿ ನಾಳ ನಿವಾಸಿ ಕೃಷ್ಣ ಮಯ್ಯ ಭಟ್ ಅವರು ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪ ಸಂಸ್ಕಾರ ಕ್ರಿಯಾಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದ ರು. ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬಾಡಿಗೆ ರೂಮ್ ನಲ್ಲಿ ವಾಸಿಸುತ್ತಿದ್ದ ಅವರು, ಇಂದು ಅದೇ ಬಾಡಿಗೆ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
08/10/2020 09:45 pm