ಬಂಟ್ವಾಳ: ಶುಕ್ರವಾರ ಬೆಳಗಿನ ಜಾವ ನಡೆದ ಆತಂಕಕಾರಿ ಘಟನೆಯಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಪೇಟೆಯಲ್ಲಿ ಒಂಟಿ ಮಹಿಳೆ ಇರುವ ಮನೆಯೊಂದಕ್ಕೆ ನುಗ್ಗಿದ ಆಗಂತುಕರು, ಮಹಿಳೆಗೆ ಹಲ್ಲೆ ನಡೆಸಿ, ಕೈ ಕಟ್ಟಿಹಾಕಿ ದರೋಡೆ ಮಾಡಿದ್ದಾರೆ.
ಬೆಳಗ್ಗೆ ಸುಮಾರು 8 ಗಂಟೆಗೆ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದ್ದು, ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ಆಗಂತುಕರು ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಟ್ಟಿ ಹಾಕಿ ದರೋಡೆಗೈದಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಎಸ್ ಐ ವಿನೋದ್ ಕುಮಾರ್ ರೆಡ್ಡಿ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು, ಪಕ್ಕದ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಎಷ್ಟು ಪ್ರಮಾಣದ ಆಭರಣ ಕದ್ದೊಯ್ಯಲಾಗಿದೆ ಎಂಬುದನ್ನು ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಶ್ವಾನದಳ ಆಗಮಿಸಿದ್ದು, ತನಿಖೆ ನಡೆಯುತ್ತಿದೆ.
Kshetra Samachara
09/10/2020 11:05 am