ಕಡಬ: ತನ್ನ ನಾದಿನಿಗೆ ಆ್ಯಸಿಡ್ ಎರಚಿ ಕೊಲೆಗೆ ಯತ್ನಿಸಿದ ಆರೋಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಳೆದ ಜನವರಿಯಲ್ಲಿ ಕಡಬ ತಾಲೂಕಿನ ಕೋಡಿಂಬಾಳದಲ್ಲಿ ಘಟನೆ ನಡೆದಿದ್ದು, ಕಡಬ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನ್ನ ತಮ್ಮನ ಪತ್ನಿ ಸಪ್ನ ಎಂಬವರಿಗೆ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಜಯಾನಂದ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದ್ದು, ಆರೋಪಿ ಜಯಾನಂದ ಇದುವರೆಗೂ ನ್ಯಾಯಾಂಗ ಬಂಧನದಲ್ಲಿಯೇ ಇದ್ದ.
ಇದೀಗ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿ ಪರ ನ್ಯಾಯವಾದಿ ಮಹೇಶ್ ಕಜೆ ವಾದಿಸಿದ್ದರು.
Kshetra Samachara
11/10/2020 09:41 am