ಮಂಗಳೂರು: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಆರೋಪಿಗಳು ತಪ್ಪಿಸಲು ಯತ್ನಿಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಮೂಡಬಿದ್ರೆಯ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ.
ಶಿರ್ತಾಡಿ ಕಡೆಯಿಂದ 6 ಗೋವುಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಸಾಗಾಟ ಮಾಡಲಾಗುತ್ತಿತ್ತು. ಈ ವಿಚಾರ ತಿಳಿದ ಮೂಡಬಿದ್ರೆ ಪೊಲೀಸರ ತಂಡ ಈ ಕಾರನ್ನು ಚೇಸಿಂಗ್ ಮಾಡಿದ ವೇಳೆ ತಂಡ ಪೊಲೀಸ್ ಜೀಪ್ ಗೆ ಡಿಕ್ಕಿ ಹೊಡೆಯಲು ಯತ್ನಿಸಿತ್ತು. ಹೀಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಆದರೆ ಆರೋಪಿಗಳು ಪರಾರಿಯಾಗಿದ್ದಾರೆ. ಮೂಡಬಿದ್ರೆ ಪೊಲೀಸರು ಕಾರು ಮತ್ತು ಗೋವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Kshetra Samachara
11/10/2020 09:46 am